ಮೂಡುಬಿದಿರೆ: ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಗಿಡಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಕೃತಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ಶೆಟ್ಟಿ ಮಾತನಾಡಿ, ಕೇವಲ ಒಂದು ದಿನಕ್ಕೆ ಪರಿಸರ ದಿನಾಚರಣೆಯನ್ನು ಸೀಮಿತಗೊಳಿಸದೆ, ದೈನಂದಿನ ಜೀವನದಲ್ಲಿ ಗಿಡಮರಗಳನ್ನು ಬೆಳೆಸಿ ಪೋಷಿಸುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.

ಬಿ. ಆರ್ ಪ್ರಸಾದ್ ಅಧ್ಯಕ್ಷತೆ ವಹಿಸಿದರು. ಮುಖ್ಯ ಶಿಕ್ಷಕ ಶಂಕರ್ ನಾಯ್ಕ್ ಪ್ರಾಸ್ತವಿಕ ಮಾತುಗಳನ್ನಾಡಿದರು.ಅರಣ್ಯ ಅಧಿಕಾರಿ ರಾಘವೇಂದ್ರ ಶೆಟ್ಟಿ, ಶಾಲೆಯ ಶಿಕ್ಷಕರು, ಉಪಸ್ಥಿತರಿದ್ದರು.

ಜಯಶ್ರೀ ಕೆ. ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ ರಾಣಿ ವಂದಿಸಿದರು.