ಮೂಡುಬಿದಿರೆ: ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲದ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಂಟಿಕಟ್ಟೆ ಕೋಟಿ ಚೆನ್ನಯ್ಯ ಕಂಬಳ ಕ್ರೀಡಾಂಗಣದ ಬಳಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಕಂಬಳ ಕ್ರೀಡಾಂಗಣದ ಸುತ್ತಮುತ್ತಲಿನ ಪರಿಸರದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟರು. ಪುರಸಭಾ ಅಧ್ಯಕ್ಷ ಮಾಜಿ ಜಯಶ್ರೀ ಕೇಶವ್, ಮಾಜಿ ಉಪಾಧ್ಯಕ್ಷ ನಾಗರಾಜ ಪೂಜಾರಿ ಒಂಟಿಕಟ್ಟೆ, ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಯಶವಂತ್ ಮಾಸ್ತಿಕಟ್ಟೆ, ಪ್ರಮುಖರಾದ ರಾಜೇಶ್ ಮಲ್ಯ, ಗೋಪಾಲ್ ಶೆಟ್ಟಿಗಾರ್, ಎಸ್ಟಿ ಮೋರ್ಚಾ ಅಧ್ಯಕ್ಷ ಅಣ್ಣಪ್ಪ ಕೆ ಎಸ್, ಮಂಡಲ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘು, ಶಕ್ತಿಕೇಂದ್ರ ಪ್ರಮುಖರಾದ ಕರುಣಾಕರ ಶೆಟ್ಟಿ ಮತ್ತು ಶಶಿಕಿರಣ್ ಕಲ್ಲಬೆಟ್ಟು ಭಾಗವಹಿಸಿದ್ದರು. ಯುವ ಮೋರ್ಚಾ ಕಾರ್ಯದರ್ಶಿ ಪ್ರಜ್ವಲ್ ಶೆಣೈ, ಬೂತ್ ಪ್ರಮುಖರಾದ ಉಮೇಶ್ ಹೆಗ್ಡೆ, ಪ್ರವೀಶ್ ಒಂಟಿ ಕಟ್ಟೆ, ವಿಠ್ಠಲ್ ದೇವಾಡಿಗ, ಶಿವರಾವ್ ಶೆಟ್ಟಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.