ಮೂಡುಬಿದಿರೆ: ಪಾಡ್ಯಾರಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡುಬಿದಿರೆ ವಲಯ ಸಾಮಾಜಿಕ ಅರಣ್ಯಾಧಿಕಾರಿ ಜಯಪ್ರಕಾಶ್ ಮತ್ತು ಸಹಾಯಕ ಅರಣ್ಯ ಅಧಿಕಾರಿ ಆನಂದ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲೆಯ ಇಕೋ ಕ್ಲಬ್ ಮತ್ತು ಶಾಲಾ ವನದ ಪರಿಸರದಲ್ಲಿ ವಿದ್ಯಾರ್ಥಿಗಳು ತಮ್ಮ ತಾಯಿಯ ಹೆಸರಿನಲ್ಲಿ ಗಿಡಗಳನ್ನು ನೆಟ್ಟು ಗಮನ ಸೆಳೆದರು. ಶಾಲಾ ಆವರಣದಲ್ಲಿ ಹುಣಸೆ, ಹೊಂಗೆ, ಕಹಿಬೇವು, ಬಿದಿರು, ರಾಮಪತ್ರಿ, ಜಾರಿಗೆ ಹಾಗೂ ಹೆಬ್ಬಲಸು ಸೇರಿದಂತೆ ವಿವಿಧ ತಳಿಯ ಸುಮಾರು 16 ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಾವು ನೆಟ್ಟ ಗಿಡಗಳನ್ನು ಜವಾಬ್ದಾರಿಯಿಂದ ಪೋಷಿಸಿ ಬೆಳೆಸುವ ಪ್ರತಿಜ್ಞೆ ಕೈಗೊಂಡರು. ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ದಿನಗಳಲ್ಲಿ ಪರಿಸರ ಸಂರಕ್ಷಣೆಯ ಅಗತ್ಯದ ಕುರಿತು ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಪ್ರಸನ್ನ ವಿ. ಶೆಣೈ , ಸಹ ಶಿಕ್ಷಕ ರಾಬರ್ಟ್ ಡಿಸೋಜಾ, ಸ್ವಯಂಸೇವಕ ಶಿಕ್ಷಕಿ ಪ್ರತಿಭಾ, ಪ್ರಜ್ವಲ್ ಮತ್ತು ಅಕ್ಷರ ದಾಸೋಹ ಸಿಬ್ಬಂದಿ ಕಸ್ತೂರಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.