ಮೂಡುಬಿದಿರೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಹೋಲಿ ಏಂಜಲ್ಸ್ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಶುಕ್ರವಾರ ಜಂಟಿಯಾಗಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಪ್ರಕೃತಿಯನ್ನು ಉಳಿಸಿದರೆ ಪ್ರಕೃತಿ ನಮ್ಮನ್ನು ಉಳಿಸುತ್ತದೆ ಎಂಬ ಸಂದೇಶದೊಂದಿಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ವಿವಿಧ ಸಾಂಸ್ಕೃತಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬಳಿಕ ಶಾಲೆಯಿಂದ ಶಿರ್ತಾಡಿ ಪಟ್ಟಣದವರೆಗೆ ಪರಿಸರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಾಥಾದ ವೇಳೆ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆ ತ್ಯಜಿಸೋಣ, ಮರಗಳನ್ನು ಬೆಳೆಸೋಣ ಹಾಗೂ ಪರಿಸರವನ್ನು ಉಳಿಸೋಣ ಎಂಬ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಿದರು. ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಮಾಲಿನ್ಯದ ದುಷ್ಪರಿಣಾಮಗಳನ್ನು ಬಿಂಬಿಸುವ ಅಣಕು ಪ್ರದರ್ಶನವು ಸಾರ್ವಜನಿಕರ ಗಮನ ಸೆಳೆಯಿತು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂಬ ಸಂದೇಶ ಸಾರಿದ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮಾಲಿನ್ಯ ನಿರ್ಮೂಲನೆಯ ಅಗತ್ಯತೆಯನ್ನು ಒತ್ತಿಹೇಳಿದರು. ಪರಿಸರವನ್ನು ಸ್ವಚ್ಛವಾಗಿಡುವ ಮೂಲಕ ಉತ್ತಮ ಭವಿಷ್ಯ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಜನರಿಗೆ ತಲುಪಿಸಲಾಯಿತು. ಕಾರ್ಯಕ್ರಮದಲ್ಲಿ ಉಭಯ ಶಾಲೆಗಳ ಮುಖ್ಯ ಶಿಕ್ಷಕರಾದ ಬಿಂದು ಮ್ಯಾಕ್ಸಿಂ ಡಿಸೋಜ, ಫ್ಲೇವಿಯಾ ಕ್ರಾಸ್ತಾ, ಶಿಕ್ಷಕರು ಉಪಸ್ಥಿತರಿದ್ದರು.ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಶಿರ್ತಾಡಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ
ಮೂಡುಬಿದಿರೆ: ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಮತ್ತು ನಾರಾಯಣ ಗುರು ಮಹಿಳಾ ಘಟಕದ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಆ.21ರಂದು ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ಕೊಡ್ಯಡ್ಕ ಮಿತ್ತಬೈಲ್ ಬಳಿ ಪಿಕ್ಅಪ್ ವಾಹನ ಪಲ್ಟಿ
ಮೂಡುಬಿದಿರೆ: ಕೊಡ್ಯಡ್ಕ ಮಿತ್ತಬೈಲ್ ಬಳಿ ಜನರೇಟರ್ ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು. ಪಾಲಡ್ಕ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನವು ಕೊಡ್ಯಡ್ಕ ಮಿತ್ತಬೈಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾಗಿ ಬಿದ್ದಿದೆ. ವಾಹನದಲ್ಲಿ ಜನರೇಟರ್ ಸಾಗಿಸಲಾಗುತ್ತಿತ್ತು.
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.