ಮೂಡುಬಿದಿರೆ: ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯು ಇಂಡಿಯನ್ ಟ್ಯಾಲೆಂಟ್ ಒಲಿಂಪಿಯಾಡ್ (ಐಟಿಒ) ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಗೋಲ್ಡನ್ ಸ್ಕೂಲ್’ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.

2025–26ನೇ ಸಾಲಿನ ಇಂಡಿಯನ್ ಟ್ಯಾಲೆಂಟ್ ಒಲಿಂಪಿಯಾಡ್ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಭಾಗವಹಿಸುವಿಕೆ ಹಾಗೂ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳು ಮತ್ತು ಶೈಕ್ಷಣಿಕ ಉತ್ಕೃಷ್ಟತೆಯ ಮೂಲಕ ಶಾಲೆ ಈ ಗೌರವಕ್ಕೆ ಪಾತ್ರವಾಗಿದೆ.

ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳ ಸಮೂಹ ಪ್ರಯತ್ನದಿಂದ ಈ ಸಾಧನೆ ಸಾಧ್ಯವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಶಾಲೆಯ ಪ್ರಗತಿಗೆ ಈ ಪ್ರಶಸ್ತಿ ಮತ್ತಷ್ಟು ಗರಿಮೆಯನ್ನು ತಂದಿದೆ ಎಂದು ಶಾಲೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.