ಮೂಡುಬಿದಿರೆ: ಕೆ -ಸಿಇಟಿಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವೈದ್ಯಕೀಯ, ಇಂಜಿನಿಯರಿಂಗ್, ಬಿಎಸ್ಸಿ ಕೃಷಿ ಹಾಗೂ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೂರರೊಳಗಿನ ರ‌್ಯಾಂಕ್ ಪಡೆದಿದ್ದಾರೆ.
ತನ್ಮಯಿ ಕೋಟಿ 18ನೇ, ತನುಶ್ರೀ ಎಚ್.ಆರ್. 23ನೇ, ಧ್ರುವಂತ್ ಕೆ. ಮತ್ತು ನಿಖಿಲ್ ಎಸ್.ಎಸ್. ತಲಾ 41ನೇ ಹಾಗೂ ನಿಶ್ಚಲ್ 58ನೇ ರ‌್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ದಾಖಲಿಸಿದ್ದಾರೆ. ಇದಲ್ಲದೆ, ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತಮ ರ‌್ಯಾಂಕ್ ಗಳಿಸುವ ಮೂಲಕ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪುಷ್ಪರಾಜ್, ಸಂಯೋಜಕರಾದ ಡಾ. ಪ್ರಶಾಂತ್ ಹೆಗಡೆ, ರಂಜಿತ್ ಜೈನ್, ಉಪನ್ಯಾಸಕರು ಅಭಿನಂದಿಸಿದ್ದಾರೆ.