ಮೂಡುಬಿದಿರೆ: ನಿಡ್ಡೋಡಿಯ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಸ್ಥಾಪಕಾಧ್ಯಕ್ಷ ಭಾಸ್ಕರ ದೇವಸ್ಯ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.
ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಪರಿಸರದ ಮಹತ್ವ ಸಾರುವ ಹಾಡು, ನೃತ್ಯ ಮತ್ತು ನಾಟಕಗಳನ್ನು ಪ್ರಸ್ತುತಪಡಿಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲರಾದ ಅನುರಾಧ, ಮುಖ್ಯ ಶಿಕ್ಷಕಿ ಸೀಮಾ ಹಾಗೂ ಸಹಮುಖ್ಯಶಿಕ್ಷಕಿ ಜಯಶ್ರೀ ಉಪಸ್ಥಿತರಿದ್ದರು.