ಮೂಡುಬಿದಿರೆ: ಬೆದ್ರ ಉತ್ಸವ ಸಮಿತಿ ಆಶ್ರಯದಲ್ಲಿ ನಡೆದ ಬೆದ್ರ ಉತ್ಸವ 2026 ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವರಿಗೆ ಬೆದ್ರ ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಮೋಹನ ಆಳ್ವ, ನನ್ನ ತಂದೆ ಮಿಜಾರು ಆನಂದ ಆಳ್ವ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿರುವುದು ಸಂತೋಷ ನೀಡಿದೆ.ಬೆದ್ರ ಉತ್ಸವ ಪ್ರಥಮ ಬಾರಿ ನಡೆಯುತ್ತಿದ್ದು, ಪ್ರತಿ ವರ್ಷ ನಡೆಯುವಂತಾಗಬೇಕು ಎಂದರು. ಹಿರಿಯ ವಕೀಲ ಬಾಹುಬಲಿ ಪ್ರಸಾದ್,ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ, ಪುರಸಭೆ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಬೆದ್ರ ಉತ್ಸವ ಸಮಿತಿಯ ಉಪಾಧ್ಯಕ್ಷ ಸುದರ್ಶನ ಎಂ., ಸಂಚಾಲಕ ಹರೀಶ್ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಗೋಪಾಲ ಶೆಟ್ಟಿಗಾರ್, ಕೋಶಾಧಿಕಾರಿ ನಾಗೇಶ್ ಬಂಗೇರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.