ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್ ದಂಡಾವತಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಅರುಣ್ ಕುಮಾರ್ ದಂಡಾವತಿ ಅವರು “Synthesis, Characterization and Nonlinear Optical Properties of Some New Terphenyl Derivatives” ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದು, ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಸಂಶುದ್ದೀನ್ ಸೆರಂತಿಮಠ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಗಳಾದ ಫ್ರಾನ್ಸಿಸ್ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರರಾಗಿರುವ ಅರುಣ್ ಕುಮಾರ್ ದಂಡಾವತಿ ಅವರ ಈ ಶೈಕ್ಷಣಿಕ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಶಿರ್ತಾಡಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ
ಮೂಡುಬಿದಿರೆ: ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಮತ್ತು ನಾರಾಯಣ ಗುರು ಮಹಿಳಾ ಘಟಕದ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಆ.21ರಂದು ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ಕೊಡ್ಯಡ್ಕ ಮಿತ್ತಬೈಲ್ ಬಳಿ ಪಿಕ್ಅಪ್ ವಾಹನ ಪಲ್ಟಿ
ಮೂಡುಬಿದಿರೆ: ಕೊಡ್ಯಡ್ಕ ಮಿತ್ತಬೈಲ್ ಬಳಿ ಜನರೇಟರ್ ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು. ಪಾಲಡ್ಕ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನವು ಕೊಡ್ಯಡ್ಕ ಮಿತ್ತಬೈಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾಗಿ ಬಿದ್ದಿದೆ. ವಾಹನದಲ್ಲಿ ಜನರೇಟರ್ ಸಾಗಿಸಲಾಗುತ್ತಿತ್ತು.
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.