ಮೂಡುಬಿದಿರೆ: 2025-26ನೇ ಸಾಲಿನ ಇಂಡಿಯನ್ ಟ್ಯಾಲೆಂಟ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಜೀನನ್ ರಿಶ್ಲೇ ಸಿಕ್ವೇರಾ ಗಮನಾರ್ಹ ಸಾಧನೆ ಮಾಡಿದ್ದು, ತನ್ನ ತರಗತಿಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದ ಜೀನನ್ ರಿಶ್ಲೇ ಸಿಕ್ವೇರಾ ನಾಲ್ಕು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕವನ್ನು ಪಡೆದು ಶಾಲೆ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿದ್ದಾನೆ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಸಾಧನೆಗೆ ಶಿಕ್ಷಣ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ. ಜೀನನ್ ರಿಶ್ಲೇ ಸಿಕ್ವೇರಾ ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯ ಪ್ರಸನ್ನ ಜೋಯೆಲ್ ಸಿಕ್ವೇರಾ- ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಮೊನಿಕಾ ರೀನಾ ಟೆಲ್ಲಿಸ್ ದಂಪತಿಯ ಪುತ್ರ.