ಮೂಡುಬಿದಿರೆ: ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಅಧೀನದಲ್ಲಿರುವ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ, ನಿಡ್ಡೋಡಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, ಮಂಗಳೂರು ವತಿಯಿಂದ ಹಮ್ಮಿಕೊಳ್ಳಲಾದ ‘ಯಕ್ಷಧ್ರುವ–ಯಕ್ಷಶಿಕ್ಷಣ’ ಯೋಜನೆಯ 2026-27ನೇ ಸಾಲಿನ ಯಕ್ಷಗಾನ ತರಗತಿಗೆಚಾಲನೆ ನೀಡಲಾಯಿತು.
ಅಧ್ಯಕ್ಷತೆಯನ್ನು ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಭಾಸ್ಕರ್ ದೇವಸ್ಯ ವಹಿಸಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಉಪಾಧ್ಯಕ್ಷ ಶಾಂತಾರಾಮ್ ಕುಡ್ವ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಸಂಚಾಲಕರಾದ ಮನೋಜ್ ಕುಮಾರ್ ಶೆಟ್ಟಿ ಹಾಗೂ ರವಿ ಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು. ಯಕ್ಷಗುರು ರಕ್ಷಿತ್ ಶೆಟ್ಟಿ ಪಡ್ರೆ, ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಸಾಗರ್ ಹಾಗೂ ಮುಖ್ಯೋಪಾಧ್ಯಾಯಿನಿ ಸೀಮಾ ಉಪಸ್ಥಿತರಿದ್ದರು.
ಶಿಕ್ಷಕಿ ಸುಜಾತ ಸ್ವಾಗತಿಸಿದರು. ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಲ್ಲಿ ಯಕ್ಷಗಾನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಅರಿವು ಮೂಡಿಸುವ ಉದ್ದೇಶದಿಂದ ಈ ತರಗತಿಯನ್ನು ಆರಂಭಿಸಲಾಗಿದೆ ಎಂದು ತಿಳಿಸಲಾಯಿತು.