ಮೂಡುಬಿದಿರೆ: ದೀರ್ಘಾವಧಿ ಆಡಳಿತ ನಡೆಸುತ್ತಿರುವ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆಯ ಯಶಸ್ಸಿಗಾಗಿ ಕಟೀಲು ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಈ ಧಾರ್ಮಿಕ ಕಾರ್ಯಕ್ರಮ ಆಯೋಜನೆಗೊಂಡಿದೆ.

12 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಈ ವಿಶೇಷ ಪ್ರಾರ್ಥನೆ ನಡೆಯುತ್ತಿದೆ. ಮುಲ್ಕಿ ಮೂಡುಬಿದಿರೆ ಮಂಡಲದ ವ್ಯಾಪ್ತಿಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೂನ್ 10, 2026 ರಂದು ಬೆಳಗ್ಗೆ 9 ಗಂಟೆಗೆ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿವೆ. ದೇಶದ ಪ್ರಗತಿ ಮತ್ತು ಪ್ರಧಾನಿಯವರ ಆರೋಗ್ಯಕ್ಕಾಗಿ ನಡೆಯುವ ಈ ವಿಶೇಷ ಪೂಜೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಮುಲ್ಕಿ ಮೂಡುಬಿದಿರೆ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.