ಮೂಡುಬಿದಿರೆ: ಇಲ್ಲಿನ ಲಯನ್ಸ್ ಸೇವಾ ಟ್ರಸ್ಟ್ ಮತ್ತು ಲಯನ್ಸ್ ಕ್ಲಬ್ ಜಂಟಿಯಾಗಿ ಕೀರ್ತಿ ನಗರದಲ್ಲಿ ನಿರ್ಮಿಸಿರುವ ಸುಸಜ್ಜಿತ 'ಹರಿಭವ' ಸಭಾಭವನದ ಉದ್ಘಾಟನೆ ಹಾಗೂ ಲಯನ್ಸ್ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಜೂನ್ 25 ರಂದು ಸಂಜೆ 6 ಗಂಟೆಗೆ ನೆರವೇರಲಿದೆ. ಲಯನ್ಸ್ ಜಿಲ್ಲೆ 317 ಡಿ ಜಿಲ್ಲಾ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ ಹೊಸ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಎ. ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಪ್ರಥಮ ಜಿಲ್ಲಾ ಉಪ ರಾಜ್ಯಪಾಲ ಹೆಚ್. ಎಂ. ತಾರಾನಾಥ್ , ದ್ವಿತೀಯ ಜಿಲ್ಲಾ ಉಪ ರಾಜ್ಯಪಾಲ ಗೋವರ್ಧನ್ ಕೆ. ಶೆಟ್ಟಿ, ಪ್ರಾಂತೀಯ ಅಧ್ಯಕ್ಷ ಡಿ. ಕೆ. ಜಗದೀಶ್ಚಂದ್ರ, ವಲಯಾಧ್ಯಕ್ಷ ಜೋಸ್ಸಿ ಮೆನೇಜಸ್ l ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಲಯನ್ಸ್ ಕ್ಲಬ್ ಕಾರ್ಯದರ್ಶಿ ಓಸ್ವಾಲ್ಡ್ ಮಾರ್ಟಿನ್ ಡಿಕೋಸ್ತ, ಕೋಶಾಧಿಕಾರಿ ಹರೀಶ್ ತಂತ್ರಿ ಎಂ., ಲಯನ್ಸ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಕ್ಲಿಫರ್ಡ್ ರೋಕಿ ಪಿಂಟೊ, ಕೋಶಾಧಿಕಾರಿ ವಿನೋದ್ ವಿಲ್ಫ್ರೆಡ್ ಡಿಸೋಜ, ಕ್ಲಬ್ ಅಧ್ಯಕ್ಷ ಲಿಯೋ ಪ್ರಖ್ಯಾತ್ ಹೆಗ್ಡೆ, ಕಾರ್ಯದರ್ಶಿ ಲಿಯೋ ಸ್ವಯಂ ಎಸ್. ಪೂಜಾರಿ, ಕೋಶಾಧಿಕಾರಿ ಲಿಯೋ ಶಶಾಂಕ್ ಸಹಿತ ಪ್ರಮುಖರು ಭಾಗವಹಿಸಲಿದ್ದಾರೆ. ಸಂಜೆಯ ಸಭಾ ಕಾರ್ಯಕ್ರಮದ ಬಳಿಕ ರಾತ್ರಿ 7:30 ರಿಂದ ಪ್ರೀತಿಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ತದನಂತರ ರಾತ್ರಿ 8 ಗಂಟೆಗೆ ಬೈಲೂರು ಚೈತನ್ಯ ಕಲಾವಿದರು ತಂಡದ ಪ್ರಸನ್ನ ಶೆಟ್ಟಿ ಬೈಲೂರು ನಿರ್ದೇಶನದ ಜನಪ್ರಿಯ ತುಳು ನಾಟಕ 'ರಾಧು ಮಾಸ್ಟ್ರು' ಪ್ರದರ್ಶನಗೊಳ್ಳಲಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಶಿರ್ತಾಡಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ
ಮೂಡುಬಿದಿರೆ: ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಮತ್ತು ನಾರಾಯಣ ಗುರು ಮಹಿಳಾ ಘಟಕದ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಆ.21ರಂದು ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ಕೊಡ್ಯಡ್ಕ ಮಿತ್ತಬೈಲ್ ಬಳಿ ಪಿಕ್ಅಪ್ ವಾಹನ ಪಲ್ಟಿ
ಮೂಡುಬಿದಿರೆ: ಕೊಡ್ಯಡ್ಕ ಮಿತ್ತಬೈಲ್ ಬಳಿ ಜನರೇಟರ್ ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು. ಪಾಲಡ್ಕ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನವು ಕೊಡ್ಯಡ್ಕ ಮಿತ್ತಬೈಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾಗಿ ಬಿದ್ದಿದೆ. ವಾಹನದಲ್ಲಿ ಜನರೇಟರ್ ಸಾಗಿಸಲಾಗುತ್ತಿತ್ತು.
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.