ಕಾರ್ಕಳ: ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ ಸಾಣೂರು ವತಿಯಿಂದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

2025-26ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಸಿಬಿಎಸ್‌ಇ ಸೇರಿದಂತೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಇಲ್ಲಿ ಪುರಸ್ಕರಿಸಲಾಗುತ್ತದೆ. ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಇಲ್ಲಿನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗೆ ಈ ಗೌರವ ಸಲ್ಲಿಕೆಯಾಗಲಿದೆ. ಕಾರ್ಯಕ್ರಮವು ಜೂನ್ 14 ನೇ ರವಿವಾರ ಬೆಳಿಗ್ಗೆ 10.30 ಕ್ಕೆ ಸಾಣೂರು ರಿಜೆನ್ಸಿ ಹಾಲ್ ಸಭಾಂಗಣದಲ್ಲಿ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.