ಮೂಡುಬಿದಿರೆ: ಕಲ್ಲಬೆಟ್ಟುವಿನ ಗಂಟಾಲ್ಕಟ್ಟೆ ನಮ್ಮ ಕ್ಲಿನಿಕ್‌ನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಶಿಬಿರ ಆಯೋಜಿಸಲಾಗಿತ್ತು.

ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಧತ್ವ ನಿವಾರಣಾ ವಿಭಾಗ, ಲಯನ್ಸ್ ಕ್ಲಬ್ ಮೂಡುಬಿದಿರೆ, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ ಹಾಗೂ ಗಂಟಲ್ಕಟ್ಟೆ ನಮ್ಮ ಕ್ಲಿನಿಕ್ ಇವುಗಳ ಜಂಟಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾಕ್ಟರ್ ಮಾನಸ ಶಿಬಿರವನ್ನು ಉದ್ಘಾಟಿಸಿ, ಸಾರ್ವಜನಿಕರಿಗೆ ಕಣ್ಣಿನ ಆರೈಕೆ ಹಾಗೂ ಆರೋಗ್ಯದ ಕುರಿತು ಮಾಹಿತಿ ನೀಡಿದರು.

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಕ್ಷತಾ ನಾಯಕ್, ವಕೀಲ ಎಂ ಬಾಹುಬಲಿ ಪ್ರಸಾದ್, ಸುರೇಶ್ ಕೋಟ್ಯಾನ್, ಕೃಷ್ಣರಾಜ ಹೆಗ್ಡೆ, ಪದ್ಮಯ ಬಿ ಸುವರ್ಣ, ಶ್ರೀಧರ್, ಶಾರದಾದೇವಿ, ಮುಖ್ಯ ಶಿಕ್ಷಕಿ ನಿಶಾ, ನಮ್ಮ ಕ್ಲಿನಿಕ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸುಮಾರು 105 ಫಲಾನುಭವಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು.