ಮೂಡುಬಿದಿರೆ: ಜ್ಞಾನರತ್ನ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಂಗಸಂಸ್ಥೆಯಾದ ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ವಿದ್ಯಾರ್ಥಿಗಳಿಗೆ ವಿದ್ಯಾರಂಭದ ‘ಅಕ್ಷರಾಭ್ಯಾಸ’ ಕಾರ್ಯಕ್ರಮ ಜರುಗಿತು.

ಡಾ. ಸೋಂದಾ ಭಾಸ್ಕರ್ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಅಧ್ಯಕ್ಷತೆಯನ್ನು ಟ್ರಸ್ಟ್‌ನ ಕಾರ್ಯದರ್ಶಿ ಸಂಗೀತ ಭಾಸ್ಕರ್ ದೇವಸ್ಯ ವಹಿಸಿದ್ದರು.

ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲೆ ಅನುರಾಧಾ ಸಾಲ್ಯಾನ್, ಮುಖ್ಯ ಶಿಕ್ಷಕಿ ಸೀಮಾ, ಸಹ-ಮುಖ್ಯ ಶಿಕ್ಷಕಿ ಜಯಶ್ರೀ ಉಪಸ್ಥಿತರಿದ್ದರು.