ಮೂಡುಬಿದಿರೆ: ಕಾರು ಮೂಡುಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ಬುಧವಾರ ಬೆಳುವಾಯಿ ಕೆಸರುಗದ್ದೆ ಹೆದ್ದಾರಿಯಲ್ಲಿ ಹೋಗುತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು, ವಾಹನಕ್ಕೆ ಹಾನಿಯಾಗಿದೆ. ಕಾರಿನಲ್ಲಿದ್ದ ಯುವತಿಗೆ ಗಾಯಗಳಾಗಿದೆ.