ಮೂಡುಬಿದಿರೆ: ಕಲ್ಲಮುಂಡ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಅಧ್ಯಯನ ಸಾಮಗ್ರಿಗಳನ್ನು ವಿತರಿಸಲಾಯಿತು.

ಕೇರ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಿಲ್ ಮೆಂಡೋನ್ಸ, ಸಂದೇಶ್, ಪ್ರತೀಕ್ ಮತ್ತು ಭಾಸ್ಕರ್ ಒಟ್ಟು 35,000 ರೂಪಾಯಿ ಮೌಲ್ಯದ ಈ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಎಲ್ಲಾ ಮಕ್ಕಳಿಗೆ ರಾಜೇಶ್ ಅಂಚನ್ ಉಚಿತ ಗುರುತಿನ ಚೀಟಿಗಳನ್ನು ವಿತರಿಸಿದರು. ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯ ಹಾಗೂ ದಾನಿ ಹರೀಶ್ ಮಿರಾಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿದ್ದರು.

ಎಸ್ಡಿಎಂಸಿ ಅಧ್ಯಕ್ಷ ವಸಂತ್ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ದಾನಿ ಅನಿಲ್ ಮೆಂಡೋನ್ಸ ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ಅವರು, ಪೋಷಕರು ಮನೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ಮತ್ತು ಉತ್ತಮವಾದ ವಾತಾವರಣವನ್ನು ನಿರ್ಮಿಸಿಕೊಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರು, ಹೆತ್ತವರು, ಪೋಷಕರು ಮತ್ತು ಊರಿನ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಲ್ ಜಿ ಸ್ವಾಗತಿಸಿ, ದಾನಿಗಳನ್ನು ಸನ್ಮಾನಿಸಿದರು. ಶೈಲಾಶ್ರೀ ಸನ್ಮಾನಿತರನ್ನು ಪರಿಚಯಿಸಿದರು. ಯಶೋದಾ ಕಾರ್ಯಕ್ರಮ ನಿರೂಪಿಸಿದರು. ಸರಿತ ವಂದಿಸಿದರು.