ವೇಣೂರು: ಕರಿಮಣೇಲಿನ ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.
ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ವ್ಯವಸ್ಥೆ, ವಸತಿ ಸೌಲಭ್ಯಗಳು ಹಾಗೂ ವಿವಿಧ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಲಾಯಿತು. ಅಲ್ಲದೆ, ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ ಅವರ ಸಂದೇಹಗಳನ್ನು ನಿವಾರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಡಾ. ಶರತ್ ಗೋರೆ ಮಾತನಾಡಿ, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು. ನೀಟ್ ಮತ್ತು ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಐದನೇ ತರಗತಿಯಿಂದಲೇ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು. ಇದರಿಂದ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ಹಂತಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಜೊತೆಗೆ ಶಾಲೆಯ ವಿವಿಧ ಸೌಲಭ್ಯಗಳು ಹಾಗೂ ಕಾರ್ಯವೈಖರಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಶಾಂಭವಿ ಬಿ.ಎನ್. ಮಾತನಾಡಿ, ಸಂಸ್ಥೆಯ ಉದ್ದೇಶಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.
ಶಾಲೆಯ ಪ್ರಾಂಶುಪಾಲ ಶಶಿಧರ್ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಸತಿ ನಿಲಯದ ನಿಯಮಾವಳಿಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಶೈಕ್ಷಣಿಕ ಮುಖ್ಯಸ್ಥೆ ಜೆಸಿಂತಾ ಡಿ ಕುನ್ಹ ವಿದ್ಯಾರ್ಥಿಗಳ ಪರೀಕ್ಷಾ ವಿಧಾನ, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ಶೈಕ್ಷಣಿಕ ಯೋಜನೆಗಳ ಕುರಿತು ವಿವರಿಸಿದರು. ಕ್ಯಾಂಪಸ್ ಹೆಡ್ ಪ್ರಖ್ಯಾತ್ ಬೆಳುವಾಯಿ ಉಪಸ್ಥಿತರಿದ್ದರು. ಶಿಕ್ಷಕಿ ಶ್ಯಾರನ್ ಕಾರ್ಯಕ್ರಮ ನಿರೂಪಿಸಿದರು. ಜೆಸಿಂತಾ ವಂದಿಸಿದರು.