ಮೂಡುಬಿದಿರೆ: ಆರು ದಶಕಗಳಿಂದ ಗುಣಮಟ್ಟದ ಚಿನ್ನಾಭರಣಗಳ ತಯಾರಿಕೆಯಲ್ಲಿ ಕಾಂತೇಶ್ವರ ಜ್ಯುವೆಲ್ಲರ್ಸ್ ತನ್ನದೇ ಆದ ಛಾಪು ಮೂಡಿಸಿದೆ. ಕಾಂತಾವರ ರಾಮಯ್ಯ ಆಚಾರ್ಯರು ಗಳಿಸಿದ ಗ್ರಾಹಕರ ನಂಬಿಕೆ ಮತ್ತು ಪ್ರೀತಿಯ ಪರಂಪರೆಯನ್ನು ಎರಡನೇ ಮತ್ತು ಮೂರನೇ ತಲೆಮಾರಿನವರು ಸಮರ್ಥವಾಗಿ ಮುಂದುವರಿಸಿಕೊಂಡು ಬಂದಿದ್ದಾರೆ ಎಂದು ಡಾ. ಕೆ. ಜೀವಂಧರ ಬಲ್ಲಾಳ್ ಶ್ರೀಕ್ಷೇತ್ರ ಕಾಂತಾವರದ ಧರ್ಮದರ್ಶಿ ಡಾ. ಕೆ. ಜೀವಂಧರ ಬಲ್ಲಾಳ್ ಅಭಿಪ್ರಾಯಪಟ್ಟರು. ಮೂಡುಬಿದಿರೆ ಪೇಟೆಯಲ್ಲಿರುವ ರಾಮಯ್ಯ ಕಾಂಪ್ಲೆಕ್ಸ್ನಲ್ಲಿ 'ನ್ಯೂ ಕಾಂತೇಶ್ವರ ಜ್ಯುವೆಲ್ಲರ್ಸ್' ಸುಸಜ್ಜಿತ ಮಳಿಗೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಚಿನ್ನ, ಬೆಳ್ಳಿಯ ಆಭರಣಗಳ ಮೂಲಕ ಆಧುನಿಕ ಜಗತ್ತಿಗೆ ಪರಿಚಯಿಸಿ, ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸ್ವರ್ಣ ಉದ್ಯಮಿಗಳು ಗ್ರಾಹಕರಲ್ಲಿ ಅಭಿರುಚಿ ಮೂಡಿಸಬೇಕು ಎಂದರು. ಮಾಜಿ ಸಚಿವ ಕೆ. ಅಭಯಚಂದ್ರ, ಚೌಟರ ಅರಮನೆಯ ಕುಲದೀಪ ಎಂ., ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪಡ್ಯಾರಬೆಟ್ಟ ಕ್ಷೇತ್ರದ ಧರ್ಮದರ್ಶಿ ಜೀವಂಧರ ಕುಮಾರ್, ಎಂಸಿಎಸ್ ಸೊಸೈಟಿ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ ಎಂ., ಶಿರ್ತಾಡಿ ಸಂಪತ್ ಸಾಮ್ರಾಜ್ಯ, ಪೆರಾಡಿ ಸಂಜೀವ ಶೆಟ್ಟಿ, ಸಂತೋಷ ಶೆಟ್ಟಿ ಕಡಂದಲೆ, ಹಸನಬ್ಬ ಬಿ. ಪೆರಾಡಿ, ಕೆ. ಶ್ರೀಪತಿ ಭಟ್, ಮೇಘುನಾಥ ಶೆಟ್ಟಿ ಭಾಗವಹಿಸಿದ್ದರು. ಕಾಂತೇಶ್ವರ ಜ್ಯುವೆಲ್ಲರ್ಸ್ನ ಕೆ. ದಿನೇಶ ಆಚಾರ್ಯ ಉಪಸ್ಥಿತರಿದ್ದರು. ಮಳಿಗೆ ನಿರ್ಮಾಣಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು. ಎ. 22 ರವರೆಗೆ ಆಭರಣಗಳ ತಯಾರಿಕಾ ವೆಚ್ಚದಲ್ಲಿ ಶೇ. 25 ರಿಯಾಯಿತಿ ಘೋಷಿಸಲಾಯಿತು. ಕೆ. ಸುರೇಶ ಆಚಾರ್ಯ ಮತ್ತು ಸಂಜನ್ ಆಚಾರ್ಯ ಸ್ವಾಗತಿಸಿದರು. ಸೌಮ್ಯ ಕುಂದರ್ ನಿರೂಪಿಸಿದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.