ಮೂಡುಬಿದಿರೆ: ಬಾವಿಗೆ ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಕಮಲಾ (99) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮೃತ ಕಮಲಾ ಅವರು 99 ವರ್ಷ ವಯಸ್ಸಾಗಿದ್ದರೂ ಉತ್ತಮ ಆರೋಗ್ಯ ಹೊಂದಿದ್ದರು. ಇವರಿಗೆ l ಬಾವಿಗೆ ಇಣುಕಿ ನೋಡುವ ಅಭ್ಯಾಸವಿತ್ತು ಎನ್ನಲಾಗಿದೆ. ಎಂದಿನಂತೆ ಬಾವಿಯ ಬಳಿ ತೆರಳಿ ಇಣುಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.