ಮೂಡುಬಿದಿರೆ : ಮಂಗಳೂರು ವಕೀಲ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ವಕೀಲ ಸಂಘದ ನೂತನ ಅಧ್ಯಕ್ಷ ಶರತ್ ಶೆಟ್ಟಿ ಅವರನ್ನು ಶನಿವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್ ಶೇಣವ, ವಕೀಲ ವೃತ್ತಿಯಲ್ಲಿ ಹೆಸರು, ಗೌರವ ಮತ್ತು ಆರ್ಥಿಕ ಯಶಸ್ಸಿಗೆ ಆಕಾಶವಲ್ಲ, ಬಾಹ್ಯಾಕಾಶವೇ ಮಿತಿಯಾಗಿದೆ. ವೈದ್ಯನಾಗುವ ಕನಸು ನನಸಾಗದಿದ್ದರೂ ಜೀವನದ ಸೋಲುಗಳೇ ತಮ್ಮ ಯಶಸ್ಸಿನ ದಾರಿಯನ್ನು ರೂಪಿಸಿವೆ. ವೃತ್ತಿಯ ಘನತೆ ಮತ್ತು ನೈತಿಕತೆ ಕಾಪಾಡಿಕೊಂಡರೆ ಯಶಸ್ಸು ಸಹಜವಾಗಿ ದೊರೆಯುತ್ತದೆ ಎಂದರು. ಶರತ್ ಶೆಟ್ಟಿ ಮಾತನಾಡಿ, ಸಮಾಜದಲ್ಲಿ ನ್ಯಾಯ, ಸಮಾನತೆ ಮತ್ತು ಕಾನೂನು ಅನುಷ್ಠಾನದಲ್ಲಿ ವಕೀಲರ ಪಾತ್ರ ಮಹತ್ವದ್ದಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಪದವಿಯ ಜೊತೆಗೆ ಶಿಸ್ತು, ಪ್ರಾಮಾಣಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಕಾನೂನು ಶಿಕ್ಷಣದ ಪಾವಿತ್ರ್ಯ ಕಾಪಾಡಿ ಸಮಾಜದಲ್ಲಿ ಕಾನೂನು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಹಿರಿಯ ವಕೀಲರಾದ ಬಾಹುಬಲಿ ಪ್ರಸಾದ, ಶ್ವೇತಾ ಜೈನ್, ಮನೋಜ್ ಶೆಣೈ, ಜಯಪ್ರಕಾಶ್ ಭಂಡಾರಿ, ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಾಂತೇಶ್ ಜಿ.ಎಸ್. ಉಪಸ್ಥಿತರಿದ್ದರು. ಮೊಹಮ್ಮದ್ ಸಫ್ವಾನ್ ಕಾರ್ಯಕ್ರಮ ನಿರೂಪಿಸಿದರು.
ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ: ಅಪಪ್ರಚಾರಕ್ಕೆ ಜೈ ಭೀಮ್ ಯುವಸೇನೆ ಸ್ಪಷ್ಟನೆ: ಅಧಿಕಾರಿಗಳಿಗೆ ಗೌರವ ನೀಡಿ ಸಮಸ್ಯೆ ಮಂಡಿಸಿ- ವರ್ತೂರ್ ಮಂಜುನಾಥ್
ಮೂಡುಬಿದಿರೆ: ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಗೆ ಸಂಬಂಧಿಸಿ ಕೆಲವರು ಮಾಡಿರುವ ಅಪಪ್ರಚಾರದ ಬಗ್ಗೆ ನಿಖರ ಮಾಹಿತಿ ನೀಡುವ ಉದ್ದೇಶದಿಂದ ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಯುವಸೇನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸ್ಪಷ್ಟನೆ ನೀಡಲಾಯಿತು.
ಶಿರ್ತಾಡಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ
ಮೂಡುಬಿದಿರೆ: ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಮತ್ತು ನಾರಾಯಣ ಗುರು ಮಹಿಳಾ ಘಟಕದ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಆ.21ರಂದು ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ಕೊಡ್ಯಡ್ಕ ಮಿತ್ತಬೈಲ್ ಬಳಿ ಪಿಕ್ಅಪ್ ವಾಹನ ಪಲ್ಟಿ
ಮೂಡುಬಿದಿರೆ: ಕೊಡ್ಯಡ್ಕ ಮಿತ್ತಬೈಲ್ ಬಳಿ ಜನರೇಟರ್ ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು. ಪಾಲಡ್ಕ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನವು ಕೊಡ್ಯಡ್ಕ ಮಿತ್ತಬೈಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾಗಿ ಬಿದ್ದಿದೆ. ವಾಹನದಲ್ಲಿ ಜನರೇಟರ್ ಸಾಗಿಸಲಾಗುತ್ತಿತ್ತು.