ಮೂಡುಬಿದಿರೆ: ಜ್ಞಾನರತ್ನ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಂಗಸಂಸ್ಥೆಯಾದ ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಪಾಲಕ-ಪೋಷಕರ ಸಭೆ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ ಮಾಡಲಾಯಿತು.
ಸಂಸ್ಥೆಯ ಸ್ಥಾಪಕಾಧ್ಯಕ್ಷ ಭಾಸ್ಕರ ದೇವಸ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ನೂತನ ಸಾಲಿನ ಅಭಿವೃದ್ಧಿ ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಮಲ್ಲಿಕಾ ಹರೀಶ್, ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲೆ ಅನುರಾಧ ಸಾಲ್ಯಾನ್, ಮುಖ್ಯ ಶಿಕ್ಷಕಿ ಸೀಮಾ ಉಪಸ್ಥಿತರಿದ್ದರು.
ಪ್ರಸಕ್ತ ಸಾಲಿನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಪಾವನ ಆಯ್ಕೆಯಾದರು. ಸಹ ಮುಖ್ಯ ಶಿಕ್ಷಕಿ ಜಯಶ್ರೀ ಉಪಸ್ಥಿತರಿದ್ದರು. ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.