ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಯೂರಿನಲ್ಲಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಹೊಸ್ಮಾರಿನಿಂದ ಶಿರ್ತಾಡಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಹಾಗೂ ಶಿರ್ತಾಡಿಯಿಂದ ಹೊಸ್ಮಾರು ಕಡೆಗೆ ಬರುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನ ಅಳಿಯೂರಿನಲ್ಲಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.