ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರದಲ್ಲಿ ದನವೊಂದು ಭೀಕರ ಸ್ಥಿತಿಯಲ್ಲಿ ಸಾವಿಗೀಡಾಗಿರುವುದು ಬುಧವಾರ ಬೆಳಕಿಗೆ ಬಂದಿದೆ.
ದನದ ರುಂಡದ ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ದೇಹದ ವಿವಿಧ ಭಾಗಗಳಲ್ಲಿ ತರಚಿದ ರೀತಿಯ ಗಾಯಗಳು ಕಂಡುಬಂದಿವೆ. ದನವು ಯಾವ ಕಾರಣಕ್ಕೆ ಮೃತಪಟ್ಟಿದೆ ಎಂಬುದು ಸ್ಪಷ್ಟವಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪುರಸಭೆ ಸಿಬ್ಬಂದಿಯ ಸಹಕಾರದೊಂದಿಗೆ ಮೃತ ದನವನ್ನು ದಫನ ಮಾಡುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಯಿತು.