ಮೂಡುಬಿದಿರೆ: ಕರಿಂಜೆ ಗ್ರಾಮದ ಉರ್ಪೆಲ್ ಪಾದೆ ಪ್ರದೇಶದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವ ಅಪಾಯ ಎದುರಾಗಿರುವ ಬಗ್ಗೆ ಸ್ಥಳೀಯರು ಬುಧವಾರ ಪುರಸಭೆಗೆ ದೂರು ಸಲ್ಲಿಸಿದರು.

ಪುರಸಭಾ ಮಾಜಿ ಉಪಾಧ್ಯಕ್ಷ ಸುರೇಶ್ ಕೋಟ್ಯಾನ್ ನೇತೃತ್ವದಲ್ಲಿ ಸ್ಥಳೀಯರು ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರಿಗೆ ಮನವಿ ಸಲ್ಲಿಸಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಚರಂಡಿ ವ್ಯವಸ್ಥೆ ನಿರ್ಮಿಸಿ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.