ಮೂಡುಬಿದಿರೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.
ಬಳಿಕ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಅನ್ನದಾನ ಸೇವೆದಾರರಾದ ದಿನೇಶ್ ನಾಯಕ್ ಹಾಗೂ ಕುಟುಂಬಸ್ಥರರನ್ನು ದೇವಳದ ಆಡಳಿತ ಮೊಕ್ತೇಸರ ಗುರುಪ್ರಸಾದ್ ಹೊಳ್ಳ ಗೌರವಿಸಿದರು.