ಮೂಡುಬಿದಿರೆ: ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಶುಚಿತ್ವದ ಮಹತ್ವದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಬುಧವಾರ ನಡೆಯಿತು.
ಮುಖ್ಯ ಶಿಕ್ಷಕಿ ಬಿಂದು ಮ್ಯಾಕ್ಸಿ ಡಿಸೋಜ ಅವರು, ವೈಯಕ್ತಿಕ ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ ಹಾಗೂ ರೋಗಗಳ ತಡೆಗಟ್ಟುವಿಕೆಯಲ್ಲಿ ಶುಚಿತ್ವದ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಅಣುಕು ಪ್ರದರ್ಶನದ ಮೂಲಕ ದೈಹಿಕ ಶುಚಿತ್ವ ಮತ್ತು ಆರೋಗ್ಯ ಕಾಪಾಡುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.