ಮೂಡುಬಿದಿರೆ: ತಾಲೂಕಿನಲ್ಲಿ ಹಲವು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ನೇತಾಜಿ ಬ್ರಿಗೇಡ್ ತಂಡಕ್ಕೆ ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಸಂಸ್ಥೆ 'ಸೇವಾ ರತ್ನ ಗೌರವ ಪ್ರಶಸ್ತಿ' ನೀಡಿ ಗೌರವಿಸಿತು.
ಸಂಘಟನೆಯ ಸಂಚಾಲಕ ರಾಹುಲ್ ಕುಲಾಲ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.