ಮೂಡುಬಿದಿರೆ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರಂದು ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸ್ಥಾಪಕ ಅಧ್ಯಕ್ಷ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ ಯೋಗದ ಮಹತ್ವವನ್ನು ವಿವರಿಸಿ, ಕೆಲವು ಯೋಗಾಸನಗಳನ್ನು ವಿದ್ಯಾರ್ಥಿಗಳಿಗೆ ಸ್ವತಃ ಪ್ರದರ್ಶಿಸಿ ತಿಳಿಸಿಕೊಟ್ಟರು. ದೈನಂದಿನ ಜೀವನದಲ್ಲಿ ಯೋಗಾಭ್ಯಾಸ ಅಳವಡಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸೌಮ್ಯ ಜೈನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.