ಮೂಡುಬಿದಿರೆ:ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಅಂಗಸಂಸ್ಥೆಯಾದ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಭಾಸ್ಕರ ದೇವಸ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತಂಜಲಿ ಸಂಸ್ಥೆಯ ಯೋಗ ಗುರು ಗಂಗಾಧರ ಬಜ್ಪೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಯೋಗದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲೆ ಅನುರಾಧ ಸಾಲ್ಯಾನ್ , ಮುಖ್ಯ ಶಿಕ್ಷಕಿ ಸೀಮಾ, ಜಯಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ಸುಮನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.