ಮೂಡುಬಿದಿರೆ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೂಡುಮಾರ್ನಾಡು ಪಿಎಂ ಶ್ರೀ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರಿತೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಪೂರಕವಾಗಿದ್ದು, ವಿದ್ಯಾರ್ಥಿಗಳು ನಿತ್ಯ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಆರ್ ಪುತ್ರನ್ ವಿವಿಧ ಯೋಗಾಸನಗಳನ್ನು ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿದರು. ಯೋಗಾಭ್ಯಾಸದ ಮಹತ್ವ ಹಾಗೂ ಆರೋಗ್ಯದ ಮೇಲೆ ಅದರ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ, ಶಿಕ್ಷಕರಾದ ಜೋನ್ ರೊನಾಲ್ಡ್, ಸುಮಿತಾ, ಬಾಬಿ, ಛಾಯಾ ಕಿಣಿ, ವೀಕ್ಷಿತಾ ಹಾಗೂ ನವೀನ್ ಆರ್ ಪುತ್ರನ್ ಉಪಸ್ಥಿತರಿದ್ದು ವಿದ್ಯಾರ್ಥಿಗಳೊಂದಿಗೆ ಯೋಗಾಸನಗಳಲ್ಲಿ ಪಾಲ್ಗೊಂಡರು. ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.