ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸೌಮ್ಯ ತಿಲಕ್ ಶೆಟ್ಟಿ ಅವರ 'ಮಸಿಯ ಮಾತು' ಕವನ ಸಂಕಲನ ಜೂನ್ 26 ರಂದು ಬಿಡುಗಡೆಯಾಗಲಿದೆ.
ವಿದ್ಯಾಗಿರಿಯ ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಎಕ್ಸಲೆಂಟ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ಪಿ. ಸಂಪತ್ ಕುಮಾರ್ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ. ಕೃತಿ ಪರಿಚಯ ಮಾಡಲಿದ್ದಾರೆ. ಉಜಿರೆಯ ಹವ್ಯಾಸಿ ಬರಹಗಾರ್ತಿ ಆಶಾ ಅಡೂರು ಶುಭಾಶಂಸನೆಗೈಯಲಿದ್ದಾರೆ. ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯಕುಮಾರ್ ಜೈನ್ ಗೌರವ ಉಪಸ್ಥಿತರಿರಲಿದ್ದಾರೆ. ವಿದ್ಯಾಗಿರಿಯ ಆಳ್ವಾಸ್ ಪಿ.ಯು. ಕಾಲೇಜಿನ ಕನ್ನಡ ವಿಭಾಗದ ಸುಧಾರಾಣಿ ಕಾರ್ಯಕ್ರಮ ನಿರೂಪಿಸಲಿದ್ದಾರೆ.