ಮೂಡುಬಿದಿರೆ: ಕಡಂದಲೆಯ ವಿದ್ಯಾಗಿರಿಯಲ್ಲಿರುವ ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಗೆ ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ತಂಡದ ವತಿಯಿಂದ ಧ್ವನಿವರ್ಧಕ ಹಾಗೂ ಪೋಷಕರು, ದಾನಿಗಳು ಮತ್ತು ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಪ್ರಿಂಟರ್ ಕೊಡುಗೆಯಾಗಿ ನೀಡಲಾಯಿತು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕೆ.ಎಂ.ಎಫ್. ನಿರ್ದೇಶಕ ಸುಚರಿತ ಶೆಟ್ಟಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಬಾಲ್ಯದಲ್ಲಿಯೇ ಗಿಡಗಳನ್ನು ನೆಡುವ ಹಾಗೂ ಅವುಗಳನ್ನು ಪೋಷಿಸುವ ಅಭ್ಯಾಸವನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ತಂಡದ ಸಂಸ್ಥಾಪಕ ಸುನಿಲ್ ಮೆಂಡೋನ್ಸಾ ಮಾತನಾಡಿ, ಪಠ್ಯದ ಜೊತೆಗೆ ಪರಿಸರ, ಕೃಷಿ ಹಾಗೂ ಸಾಮಾಜಿಕ ಜವಾಬ್ದಾರಿಗಳ ಅರಿವು ಮೂಡಿಸುವ ಶಿಕ್ಷಣವೂ ಮಕ್ಕಳಿಗೆ ಅಗತ್ಯವಾಗಿದೆ ಎಂದು ತಿಳಿಸಿದರು.
ಮೂಡುಬಿದಿರೆ ವಲಯ ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ಸಹಯೋಗದಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ದಿನವನ್ನು ಆಚರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಸೀತಾರಾಮ್ ಸಾಲ್ಯಾನ್, ಅಲಂಗಾರ್ ಲಯನ್ಸ್ ಕ್ಲಬ್ ಅಧ್ಯಕ್ಷ ರೋಕಿ ಮಸ್ಕರೇನಸ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ, ಅರಣ್ಯ ಇಲಾಖೆಯ ಅಧಿಕಾರಿಗಳಾದ ರಾಘವೇಂದ್ರ ಹಾಗೂ ಆನಂದ್, ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಭಾ ಎಚ್.ಎನ್., ಶಿಕ್ಷಕರಾದ ಸತೀಶ್ ಶೆಟ್ಟಿ ಕಟೀಲು, ಪೌಲಿನ್ ಪಿಂಟೋ, ಸೌಮ್ಯ ಗಣೇಶ್, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.