ಮೂಡುಬಿದಿರೆ: ಜವನೆರ್ ಬೆದ್ರ ಫೌಂಡೇಶನ್ ಹಾಗೂ ಅದರ ಉಪಘಟಕಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಮತ್ತು ಸಸಿ ವಿತರಣಾ ಕಾರ್ಯಕ್ರಮ ಬೆದ್ರ ಸಮಾಜ ಮಂದಿರದಲ್ಲಿ ನಡೆಯಿತು.

ಪ್ರಾದೇಶಿಕ ರಕ್ತಪೂರಣ ಕೇಂದ್ರ ಹಾಗೂ ಸರ್ಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್ ಸಹಯೋಗದಲ್ಲಿ ಜೂನ್ 27ರಂದು ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 100ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.

75ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಪ್ರವೀಣ್ ಜೈನ್ ಬೆಳುವಾಯಿ ಕಲ್ಲಮುಂಡ್ಕೂರು ಸಹಕಾರಿ ಸೊಸೈಟಿ ಚುನಾವಣೆಯಲ್ಲಿ ಜಯ ಸಾಧಿಸಿದ ಟ್ರಸ್ಟಿ ವಿದ್ಯಾನಂದ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜವನೆರ್ ಬೆದ್ರ ಫೌಂಡೇಶನ್ ಸಂಸ್ಥಾಪಕ ಅಮರ್ ಕೋಟೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕ ಉಮನಾಥ್ ಕೋಟ್ಯಾನ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ವಿಥುನ್ ರೈ, ಮಾಜಿ ಸಚಿವ ಹಾಗೂ ಸಮಾಜ ಮಂದಿರ ಸಭಾ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಬಿಜೆಪಿ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಸುದರ್ಶನ್ ಎಂ, ವಕೀಲರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಇನ್ನರ್ ವೀಲ್ ಕ್ಲಬ್ ನಿಕಟಪೂರ್ವ ಅಧ್ಯಕ್ಷೆ ಶ್ವೇತಾ ಜೈನ್, ಮೂಡುಬಿದಿರೆ ಪುರಸಭೆ ನಿಕಟಪೂರ್ವ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಸಮಾಜ ಮಂದಿರ ಸಭಾ ಕಾರ್ಯದರ್ಶಿ ಸುರೇಶ್ ಪ್ರಭು, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಅಧ್ಯಕ್ಷ ಹರೀಶ್ ಎಂ.ಕೆ, ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಭಾಗವಹಿಸಿ ಜವನೆರ್ ಬೆದ್ರ ಫೌಂಡೇಶನ್‌ನ ಸಮಾಜಮುಖಿ ಸೇವಾ ಕಾರ್ಯವನ್ನು ಶ್ಲಾಘಿಸಿದರು.

ಸಂದೀಪ್ ಕೆಲ್ಲಪುತ್ತಿಗೆ ಕಾರ್ಯಕ್ರಮ ನಿರೂಪಿಸಿದರು. ಅಕ್ಷಯ್ ಕುಮಾರ್ ವಂದಿಸಿದರು.