ಮೂಡುಬಿದಿರೆ: ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಎ.ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ನಿಟ್ಟೆ (ಡೀಮ್ಡ್ ಟು ಬಿ ವಿಶ್ವವಿದ್ಯಾಲಯ) ಸಹಯೋಗದಲ್ಲಿ ಜೂನ್ 20ರಂದು ಮಾಸ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು.

ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ ಅಮರಶ್ರೀ ಅಮರನಾಥ ಶೆಟ್ಟಿ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ಶಾಲೆಯ 65 ವಿದ್ಯಾರ್ಥಿಗಳ ದಂತ ತಪಾಸಣೆ, ಚಿಕಿತ್ಸೆ ನಡೆಸಲಾಯಿತು.

ಶಿಬಿರಕ್ಕೆ ನಿಟ್ಟೆಯ ಎ.ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್‌ನ ಮಕ್ಕಳ ಹಾಗೂ ತಡೆಗಟ್ಟುವ ದಂತ ಚಿಕಿತ್ಸಾ ವಿಭಾಗದ ವೈದ್ಯರ ತಂಡ ಸೇವೆ ಸಲ್ಲಿಸಿತು. ವಿದ್ಯಾರ್ಥಿಗಳಲ್ಲಿ ದಂತ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಆರಂಭಿಕ ಹಂತದಲ್ಲಿಯೇ ಚಿಕಿತ್ಸೆಯ ಮಹತ್ವವನ್ನು ವೈದ್ಯರು ತಿಳಿಸಿದರು.

ಎಸ್‌ಡಿಎಂಸಿ ಮಾಜಿ ಸದಸ್ಯರಾದ ಅಬ್ದುಲ್ಲಾ ಹಮೀದ್, ಅಶೋಕ್ ಕುಮಾರ್ ಶೆಟ್ಟಿ, ಮಾಸ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸೇಸಮ್ಮ ಉಪಸ್ಥಿತರಿದ್ದರು.