ಮೂಡುಬಿದಿರೆ: ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ರೋಟರಿ ಕ್ಲಬ್ ಸಹಯೋಗದಲ್ಲಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಐದು ವರ್ಷದೊಳಗಿನ ಪುಟಾಣಿ ಮಕ್ಕಳಿಗೆ ಎರಡು ಹನಿ ಪೋಲಿಯೋ ಡ್ರಾಪ್ಸ್ ಹಾಕಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಆಗಮಿಸಿದ ಮೊದಲ ಮಗುವಿಗೆ ಪೋಲಿಯೋ ಡ್ರಾಪ್ಸ್ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಹಿರಿಯ ವಕೀಲ ಹಾಗೂ ರೋಟರಿ ಕ್ಲಬ್ ಸದಸ್ಯ ಕೆ. ಆರ್. ಪಂಡಿತ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಖಾದರ್ ನದಾಫ್, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಕ್ಷತಾ ನಾಯಕ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯೆ ಸುಪ್ರಿಯಾ ಡಿ. ಶೆಟ್ಟಿ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಸದಸ್ಯರಾದ ಸಿ. ಹೆಚ್. ಗಫೂರ್, ಉದಯಕುಮಾರ್, ಸೂರಜ್ ಬನ್ನಡ್ಕ, ಸುರೇಶ್, ಡಾ. ಮುರಳೀಕೃಷ್ಣ, ಡಾ. ರಮೇಶ್, ನಾರಾಯಣ ಪಿ. ಎಂ., ಜಯರಾಮ್ ಕೋಟ್ಯಾನ್, ಡಾ. ಸದಾನಂದ, ಸದಾಶಿವ ರಾವ್ ಮತ್ತಿತರರಿದ್ದರು.