ಮೂಡುಬಿದಿರೆ: ಚೇತನ ಯುವಕ ಮಂಡಲವು ತನ್ನ ವಾರ್ಷಿಕೋತ್ಸವದ ಅಂಗವಾಗಿ ನೀಡಿದ ₹25 ಸಾವಿರ ಹಾಗೂ ವಿಘ್ನನೇಶ್ವರ ಫ್ರೆಂಡ್ಸ್ ಮೂಡುಮಾರ್ನಾಡು ತನ್ನ ವಾರ್ಷಿಕೋತ್ಸವದ ಅಂಗವಾಗಿ ನೀಡಿದ ₹20 ಸಾವಿರ ದೇಣಿಗೆಯಿಂದ ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಯಿತು.

ಪಡುಮಾರ್ನಾಡು ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ವಾಸುದೇವ ಭಟ್, ದಾನಿ ಗಣೇಶ್ ಬೊಲ್ಯೊಟ್ಟು, ಚೇತನ ಯುವಕ ಮಂಡಲ ಅಧ್ಯಕ್ಷ ಸುನಿಲ್ ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷ ರಮೇಶ್, ಎಸ್‌ಡಿಎಂಸಿ ಮಾಜಿ ಉಪಾಧ್ಯಕ್ಷೆ ಶಶಿಕಲಾ ಗಿರೀಶ್ ಹಾಗೂ ದಾನಿ ಶಾಲಿನಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಚೇತನ ಯುವಕ ಮಂಡಲ ಮತ್ತು ವಿಘ್ನನೇಶ್ವರ ಫ್ರೆಂಡ್ಸ್ ಸದಸ್ಯರ ಸೇವೆಯನ್ನು ಶ್ಲಾಘಿಸಿ ವಂದಿಸಿದರು. ಮುಂದೆಯೂ ಶಾಲೆಯ ಅಭಿವೃದ್ಧಿಗೆ ಇದೇ ರೀತಿಯ ಪ್ರೋತ್ಸಾಹ ಮತ್ತು ಸಹಕಾರ ದೊರೆಯಲಿ ಎಂದು ಆಶಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಅರುಣಾ ಕುಮಾರಿ, ಶಿಕ್ಷಕರಾದ ಶುಭಾ, ವೇದಮೂರ್ತಿ ಎಚ್. ಎನ್, ರಕ್ಷಾ, ಎಸ್‌ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ್, ಉಪಾಧ್ಯಕ್ಷರು ರಮೇಶ್, ಸದಸ್ಯರು, ಪೋಷಕರು, ವಿದ್ಯಾರ್ಥಿ ಉಪಸ್ಥಿತರಿದ್ದರು.