ಮೂಡುಬಿದಿರೆ: ಏರೋಡೈನಾಮಿಕ್ಸ್ ಸಂಸ್ಥೆಯು ಆಳ್ವಾಸ್ ಕಾಲೇಜಿನಲ್ಲಿ ಪ್ರಾರಂಭಿಸಿರುವ ದ.ಕ ಜಿಲ್ಲೆಯ ಮೊದಲ ಡಿಜಿಸಿಎ ಮಾನ್ಯತೆ ಪಡೆದ ಡ್ರೋನ್ ತರಬೇತಿ ಕೇಂದ್ರವನ್ನು ಮಂಗಳವಾರ ಕಾಲೇಜಿನ ಆವರಣದಲ್ಲಿ ಉದ್ಘಾಟಿಸಲಾಯಿತು. ಕರ್ನಾಟಕದ ಕೋಸ್ಟ್ ಗಾರ್ಡ್ನ ಉಪಮಹಾನಿರೀಕ್ಷಕ (ಡಿಐಜಿ) ಹಾಗೂ ಜಿಲ್ಲಾ ಕಮಾಂಡರ್ ಪಿ.ಕೆ ಮಿಶ್ರಾ ಮಾತನಾಡಿ, ರಕ್ಷಣೆ ಹಾಗೂ ನಾಗರಿಕ ಕ್ಷೇತ್ರಗಳಲ್ಲಿ ಡ್ರೋನ್ ತಂತ್ರಜ್ಞಾನವು ವ್ಯಾಪಕವಾಗಿ ಬಳಸಲ್ಪಡುತ್ತಿರುವುದರಿಂದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಡಿಮೆ ವೆಚ್ಚ, ನಿಖರತೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಬಳಸಬಹುದಾದ ಸಾಮರ್ಥ್ಯದಿಂದ ಡ್ರೋನ್ಗಳು ಕ್ರಾಂತಿಕಾರಿ ತಂತ್ರಜ್ಞಾನವಾಗಿ ಹೊರಹೊಮ್ಮುತ್ತಿವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಡ್ರೋನ್ ತಂತ್ರಜ್ಞಾನವನ್ನು ಸಿದ್ಧಿಸಿಕೊಳ್ಳುವುದು ಕಾಲದ ಅಗತ್ಯ. ವಿದ್ಯಾರ್ಥಿಗಳು ಭವಿಷ್ಯಕ್ಕೆ ಸಿದ್ಧರಾಗಿ ಸುತ್ತಮುತ್ತಲಿನ ಸಂಪನ್ಮೂಲಗಳನ್ನು ಮೌಲ್ಯಪೂರ್ಣವಾಗಿ ಬಳಸಿಕೊಳ್ಳಬೇಕ. ಡ್ರೋನ್ ತಂತ್ರಜ್ಞಾನದಿಂದ ಆಧುನಿಕ ಯುದ್ಧದ ಸ್ವರೂಪವೇ ಬದಲಾಗುತ್ತಿದ್ದು, ಪರಂಪರಾಗತ ಸಶಸ್ತ್ರ ಪಡೆಗಳ ಅಗತ್ಯತೆಯನ್ನೇ ಪ್ರಶ್ನಿಸುವಂತಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆವಹಿಸಿ ಮಾತನಾಡಿ, ಈ ಕೇಂದ್ರದ ಆರಂಭದಿಂದ ಆಳ್ವಾಸ್ ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಸಮೃದ್ಧಗೊಳಿಸುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಡಿಜಿಸಿಎ ಮಾನ್ಯತೆ ಪಡೆದ ಡ್ರೋನ್ ತರಬೇತಿಯ ಪ್ರಮುಖ ಕೇಂದ್ರವಾಗಿ ಸ್ಥಾಪಿಸಲು ಸಹಕಾರಿಯಾಗಲಿದೆ ಎಂದರು. ಏರೋಡೈನಾಮಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ, ಈ ಕೇಂದ್ರದ ಮೂಲಕ ಡ್ರೋನ್ ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಡ್ರೋನ್ ಕಾರ್ಯಾಚರಣೆ, ನಿರ್ವಹಣೆ, ಸುರಕ್ಷತಾ ನಿಯಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ಸಮಗ್ರ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗೋನ್ಮುಖವಾಗಿ ರೂಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು. ವಕೀಲ ಜಗದೀಶ ಕೆ.ಶೇಣವ ಉಪಸ್ಥಿತರಿದ್ದರು. ಡಾ ಪ್ರಣಮ್ಯ ಭಟ್ ನಿರೂಪಿಸಿ, ಗ್ರೂಪ್ ಕ್ಯಾಪ್ಟನ್ ಸುಧೀರ್ ಅಮೀನ್ ಸ್ವಾಗತಿಸಿದರು. ಅನುಷಾ ಶೆಟ್ಟಿ ವಂದಿಸಿದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.