ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ, ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಲಾಡಿಯ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ನಿಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಓಬಿಸಿ ಮೋರ್ಚಾದ ಅಧ್ಯಕ್ಷ ಪ್ರದೀಪ್ ಕುಮಾರ್ ಕಾರ್ಯಕ್ರಮದ ನೇತೃತ್ವ ವಹಿಸಿದರು. ಪರಿಸರ ಸ್ವಚ್ಛತೆ ಹಾಗೂ ಸಾರ್ವಜನಿಕ ಸ್ಥಳಗಳ ಶುಚಿತ್ವ ಕಾಪಾಡುವ ಉದ್ದೇಶದಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಓಬಿಸಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಬೆಳ್ಳೆಯಾರು, ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್, ಯುವ ಮೋರ್ಚಾದ ಅಧ್ಯಕ್ಷ ಕುಮಾರ್ ಪ್ರಸಾದ್, ಕಾರ್ಯದರ್ಶಿ ಭರತ್ ಶೆಟ್ಟಿ, ಮೂಡುಬಿದಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಓಬಿಸಿ ಪ್ರಭಾರಿಗಳಾದ ಪ್ರಭಾಕರ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ನೆತ್ತೋಡಿ, ಹೇಮಂತ್ ಪಡುಪಣಂಬೂರು, ಶಕ್ತಿ ಕೇಂದ್ರದ ಪ್ರಮುಖ ವಿಠ್ಠಲ, ಮಂಡಲದ ಪ್ರಮುಖ ಸಾತ್ವಿಕ್ ಮಲ್ಯ ಉಪಸ್ಥಿತರಿದ್ದರು.