ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನ ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರವೊಂದು ಬಿದ್ದು ಮನೆಯು ಭಾಗಶಃ ಹಾನಿಗೊಳಗಾಗಿದೆ.

ರಾತ್ರಿ ಸುರಿದ ಗಾಳಿ-ಮಳೆಯ ತೀವ್ರತೆಗೆ ಮನೆಯ ಸಮೀಪದಲ್ಲಿದ್ದ ಮರವೊಂದು ಉರುಳಿ ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.