ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಂದನೇ ಬ್ಲಾಕ್‌ನಲ್ಲಿ ಎಸ್.ಐ.ಆರ್ (S.I.R) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಮಹತ್ವದ ಮತದಾರರ ಪರಿಷ್ಕರಣೆ ಕಾರ್ಯಕ್ರಮಕ್ಕೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಮತ್ತು ಪಟ್ಟಿಯನ್ನು ನವೀಕರಿಸುವ ಉದ್ದೇಶದಿಂದ ಈ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅರುಣ್ ಕುಮಾರ್ ಶೆಟ್ಟಿ ಗ್ರಾಮಸ್ಥರಲ್ಲಿ ವಿನಂತಿಸಿದ್ದಾರೆ.