ಮೂಡುಬಿದಿರೆ: ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ ಮೂಡುಬಿದಿರೆ: ತಾಲೂಕಿನ ಪುತ್ತಿಗೆ ಗ್ರಾಮದ ವಾರ್ಡ್-3ರಲ್ಲಿ ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯೆ ಗ್ರೇಟ್ಟಾ ಅವರ ಮನೆಯಿಂದ ಬಿಎಲ್‌ಒ ಮೂಲಕ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.
ಮೂಡುಬಿದಿರೆ ತಾಲೂಕಿನ ಎಲ್ಲ ವಾರ್ಡ್ ಹಾಗೂ ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭಗೊಂಡಿದ್ದು, ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಚಾಲನೆ ನೀಡಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ಬಿಎಲ್‌ಒಗಳ ಮೂಲಕ ಆರಂಭಿಸಲಾಗಿದ್ದು, ಸಂಬಂಧಿತ ವಾರ್ಡ್ ಹಾಗೂ ಗ್ರಾಮಗಳಲ್ಲಿ ಪ್ರಕ್ರಿಯೆ ಮುಂದುವರಿಯಲಿದೆ.