ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಪ್ರಾಂತ್ಯ ಕಾರ್ಯಕ್ಷೇತ್ರದ ದಾರಿದೀಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕಾರ್ಯಕ್ರಮ ಉದ್ಘಾಟಿಸಿ, ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು, ಡ್ರಗ್ಸ್ ಬಳಕೆ ಮಾಡುತ್ತಿರುವ ಮಕ್ಕಳನ್ನು ಪತ್ತೆಹಚ್ಚುವ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಯೋಜನಾಧಿಕಾರಿ ಬಿ. ಧನಂಜಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಉದ್ದೇಶ, ಅದರಡಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಮಾಸ್ತಿಕಟ್ಟೆ ಶಾಲೆಯ ಮುಖ್ಯ ಶಿಕ್ಷಕಿ ಸೇಸಮ್ಮ,ಜ್ಞಾನವಿಕಾಸ ಸಮನ್ವಯಾಧಿಕಾರಿ ವಿನೂತ, ಸೇವಾಪ್ರತಿನಿಧಿಗಳು, ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.