ಮೂಡುಬಿದಿರೆ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಅನುದಾನದಡಿ ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಮಂಗಳವಾರ ವಿತರಿಸಿದರು. ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಹಸ್ತಾಂತರಿಸಿ, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವಂತೆ ಕರೆ ನೀಡಿದರು. ಸರ್ಕಾರದ ಸೌಲಭ್ಯಗಳು ನಿಜವಾದ ಅರ್ಹರಿಗೆ ತಲುಪುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ನೆರವಾಗಬೇಕು ಎಂಬ ಉದ್ದೇಶದಿಂದ ಇಂತಹ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.