ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂಸತ್ತಿನ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 23ರಂದು ಅಣುಕು ಸಂಸತ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಖ್ಯ ಶಿಕ್ಷಕಿ ಬಿಂದು ಡಿಸೋಜ ಸಭಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳು ಸಚಿವರು, ಪ್ರತಿಪಕ್ಷ ನಾಯಕರು ಹಾಗೂ ಇತರ ಸದಸ್ಯರ ಪಾತ್ರಗಳನ್ನು ನಿರ್ವಹಿಸುವ ಮೂಲಕ ಸಂಸತ್ತಿನ ಕಲಾಪವನ್ನು ಪ್ರದರ್ಶಿಸಿದರು.

ಪ್ರತಿಪಕ್ಷ ನಾಯಕರು ವಿವಿಧ ಸಾರ್ವಜನಿಕ ವಿಷಯಗಳ ಕುರಿತು ಪ್ರಶ್ನೆಗಳನ್ನು ಕೇಳಿದರೆ, ಸಚಿವರ ಪಾತ್ರ ನಿರ್ವಹಿಸಿದ ವಿದ್ಯಾರ್ಥಿಗಳು ಅವುಗಳಿಗೆ ಸಮರ್ಪಕ ಉತ್ತರಗಳನ್ನು ನೀಡಿ ಸೂಕ್ತ ಪರಿಹಾರಗಳನ್ನು ಸೂಚಿಸಿದರು. ವಿದ್ಯಾರ್ಥಿಗಳ ಚರ್ಚೆ, ವಾದ-ಪ್ರತಿವಾದ ಹಾಗೂ ವಿಚಾರ ಮಂಡನೆ ಕಾರ್ಯಕ್ರಮದ ಪ್ರಮುಖ ವಿಚಾರವಾಗಿತ್ತು.