ಮೂಡುಬಿದಿರೆ: ತಮಿಳುನಾಡಿನಲ್ಲಿ ಜೂನ್ 26ರಿಂದ 28ರವರೆಗೆ ನಡೆದ ರಾಷ್ಟ್ರೀಯ ಮಟ್ಟದ ಸೌತ್ ಝೋನ್ ಫ್ಲೋರ್ ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಮೂಡುಬಿದಿರೆಯ ಅಮೂಲ್ಯ ಅಂಡರ್-19 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
ರಾಷ್ಟ್ರೀಯ ಮಟ್ಟದ ಈ ಕ್ರೀಡಾಕೂಟದಲ್ಲಿ ಅಮೂಲ್ಯ ಅವರ ಸಾಧನೆಗೆ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.