ಮೂಡುಬಿದಿರೆ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಬಸ್ ತಂಗುದಾಣದಲ್ಲಿ ಗುರುವಾರ ವೃದ್ಧನೊಬ್ಬನ ಶವ ಪತ್ತೆಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೃತರ ನಿಖರ ಗುರುತು ಹಾಗೂ ಸಾವಿನ ಕಾರಣವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.