ಮೂಡುಬಿದಿರೆ: ಪೇಟೆಯಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಮುಖ್ಯ ರಸ್ತೆಯ ಕೃಷ್ಣ ಕಟ್ಟೆ ಬಳಿ ಅಶ್ವತ್ಥ ಮರದ ಬೃಹತ್ ಕೊಂಬೆಯೊಂದು ರಸ್ತೆಗೆ ಉರುಳಿದ ಘಟನೆ ನಡೆದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಹಾಗೂ ರಿಕ್ಷಾ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹಠಾತ್ತನೆ ರಸ್ತೆಗೆ ಉರುಳಿದ ಬೃಹತ್ ಕೊಂಬೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಘಟನೆಯ ವೇಳೆ ಕಾರು ಮತ್ತು ರಿಕ್ಷಾದಲ್ಲಿದ್ದವರು ಸಮಯಪ್ರಜ್ಞೆಯಿಂದ ವಾಹನಗಳನ್ನು ನಿಯಂತ್ರಿಸಿದ ಪರಿಣಾಮ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.