ಮೂಡುಬಿದಿರೆ: ಕಳೆದ ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಶವ ಶನಿವಾರ ಅಲಂಗಾರಿನಲ್ಲಿರುವ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ.

ಕಾರ್ತಿಕ್ ಶೆಟ್ಟಿ ಅವಿವಾಹಿತರಾಗಿದ್ದು, ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಹಿಟಾಚಿ ಹಾಗೂ ಜೆಎಸ್‌ಬಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯಂತೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮರಣದ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ತಿಳಿಯಲಿದೆ.